ವಿವಿಧ ಸ್ವ ಉದ್ಯೋಗತರಬೇತಿಗೆ ಅರ್ಜಿ ಆಹ್ವಾನ ರುಡ್‌ಸೆಟ್ ಸಂಸ್ಥೆ, ಚಿತ್ರದುರ್ಗಪ್ರಜಾವಾಣಿ ದಿನಪತ್ರಿಕೆಯಲ್ಲಿ ಪ್ರಕಟಣಿಯ ವರದಿ ದಿನಾಂಕ 12.12.2024
ರುಡ್ ಸೆಟ್ ಸಂಸ್ಥೆˌ ಚಿತ್ರದುರ್ಗದಲ್ಲಿ ನಿರುದ್ಯೋಗಿ ಗ್ರಾಮೀಣ ಭಾಗದ ಯುವಕ-ಯುವತಿಯರಿಗಾಗಿ ಸ್ವ ಉದ್ಯೋಗ ಮಾಡಲು ಈ ಕೆಳಗಿನ ತರಬೇತಿಗಳನ್ನು ಇದೇ ಡಿಸೆಂಬರ್ / ಜನವರಿ ತಿಂಗಳಿನಲ್ಲಿ ಪ್ರಾರಂಭಿಸಲಾಗುವುದು, ಆದ್ದರಿಂದ ಆಸಕ್ತರು ನೇರವಾಗಿ ಅರ್ಜಿ ಸಲ್ಲಿಸಲು ರುಡ್‌ಸೆಟ್ ಸಂಸ್ಥೆ ತಿಳಿಸಲಾಗಿದೆ.
*1. *ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್‌ವರ್ಕಿಂಗ್ – 45 ದಿನಗಳು
- ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ – 10 ದಿನಗಳು
- ಕುರಿ ಸಾಕಾಣಿಕೆ – 10 ದಿನಗಳು
- ಫಾಸ್ಟ್ ಫುಡ್ ಸ್ಟಾಲ್ ಉದ್ಯಮ – 10 ದಿನಗಳು
- ಹಪ್ಪಳ, ಉಪ್ಪಿನಕಾಯಿ, ಮಸಾಲೆ ಪದಾರ್ಥಗಳ ತಯಾರಿಕೆ – 10 ದಿನಗಳು
- ಅಣಭೆ(ಮಶ್ರೂಮ್) ಬೇಸಾಯ – 10 ದಿನಗಳು
- ಗೊಂಬೆ ತಯಾರಿಕೆ – 13 ದಿನಗಳು
- ಕಂಪ್ಯೂಟರೈಸ್ಡ್ ಅಕೌಂಟಿಂಗ್ – 30 ದಿನಗಳು
- ಜೂಟ್ ಬ್ಯಾಗ್ ತಯಾರಿಕೆ – 13 ದಿನಗಳು
- ಮೋಟಾರ್ ರಿವೈಂಡಿಂಗ್ ಮತ್ತು ಪಂಪ್‌ಸೆಟ್ ರಿಪೇರಿ – 30 ದಿನಗಳು
ಅಭ್ಯರ್ಥಿಗಳ ಅರ್ಹತೆ:
19 ರಿಂದ 45 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ಕನ್ನಡ ಓದಲು ಬರೆಯಲು ಬಲ್ಲವರಾಗಿರಬೇಕು.
- ತರಬೇತಿಗೆ ಸಂಬಂಧಿಸಿದಂತೆ ಪ್ರಾಥಮಿಕ ಜ್ಞಾನ ಹೊಂದಿರಬೇಕು.
ಉದ್ಯೋಗವನ್ನು ಮಾಡಬೇಕೆಂಬ ಆಸಕ್ತಿ ಹೊಂದಿರಬೇಕು.
ಈ ತರಬೇತಿಗೆ ಸಂಬಂದಪಟ್ಟ ಕೌಶಲ್ಯ ಕುರಿತು ಪ್ರಾರ್ಥಮಿಕ ಜ್ಞಾನ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಊಟ ಮತ್ತು ವಸತಿ ಸಹಿತವಾಗಿ ಸಂಪೂರ್ಣ ಉಚಿತವಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಮೊಬೈಲ್ ನಂಬರ್‌ವುಳ್ಳ ಸ್ವವಿಳಾಸದ ಅರ್ಜಿಯೊಂದಿಗೆ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಜೆರಾಕ್ಸ್ ಪ್ರತಿಗಳೊಂದಿಗೆ ದಿನಾಂಕ 20.12.2024ರೊಳಗಾಗಿ ರುಡ್‌ಸೆಟ್ ಸಂಸ್ಥೆಯಲ್ಲಿ ನೇರವಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 8618282445 : 9481778047 : 9019299901 : 8660627785